Header Ads
Header Ads
Header Ads
Breaking News

ಕೋಟದಲ್ಲಿ ನಿವೃತ್ತ ಶಿಕ್ಷಕರ ಸಮಾವೇಶ ಶಿಕ್ಷಕ ವೃತ್ತಿ ಈ ಪ್ರಪಂಚದಲ್ಲೇ ಶ್ರೇಷ್ಠವಾದ ವೃತ್ತಿ ಪ್ರವರ್ತಕ ಆನಂದ ಸಿ.ಕುಂದರ್ ಹೇಳಿಕೆ

ಡಾ| ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ರಿ. ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಕನ್ನಡ ಸಾಹಿತ್ಯ ಪರಿಷತ್‌ಉಡುಪಿ ಜಿಲ್ಲಾ ಘಟಕ, ಕೋಟ ವಿವೇಕ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಸೆ.೨೪ರಂದು ವಿವೇಕ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ನಿವೃತ್ತ ಶಿಕ್ಷಕರ ಸಮಾವೇಶ ಹಾಗೂ ಸಮ್ಮಾನ ಕಾರ್ಯಕ್ರಮ ಜರಗಿತು.ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಕಾರ್ಯಕ್ರಮ ಉದ್ಘಾಟಿಸಿ, ಶಿಕ್ಷಕ ವೃತ್ತಿ ಈ ಪ್ರಪಂಚದಲ್ಲೇ ಶ್ರೇಷ್ಠವಾದ ವೃತ್ತಿ. ಈ ವೃತ್ತಿಯ ಮೂಲಕ ಆತ್ಮತೃಪ್ತಿ ಪಡೆಯಬಹುದಾಗಿದೆ. ಶಿಕ್ಷಕರು ವೃತ್ತಿಯಿಂದ ನಿವೃತ್ತರಾದ ಮೇಲೆ ಸದಾ ಕಾಲ ಚಟುವಟಿಕೆಯಿಂದ ಇರಬೇಕು. ಬೇರೆ-ಬೇರೆ ಉತ್ತಮ ವಿಚಾರಗಳಲ್ಲಿ ತೊಡಗಿಕೊಳ್ಳಬೇಕು ಎಂದರು.ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜಗದೀಶ ನಾವುಡ ಅವರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರಿಗೆ ವೃತ್ತಿಯಿಂದ ನಿವೃತ್ತರಾದ ಮೇಲೂ ಎಲ್ಲಾ ರೀತಿಯ ಗೌರವಗಳು ದೊರಕಬೇಕು ಎಂದರು.

ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ನಿವೃತ್ತ ಶಿಕ್ಷಕರಾದ ಎಚ್. ಶ್ರೀಧರ ಹಂದೆ, ಗೋಪಾಲ ಗಾಣಿಗ, ಶೇಖರ ಶೆಟ್ಟಿ ಬನ್ನಾಡಿ, ನಾರಾಯಣ ಮಾಸ್ಟ್ರ್, ನರಸಿಂಹ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು ಹಾಗೂ ನಿವೃತ್ತ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳು ಜರಗಿತು.

ಉಡುಪಿ ಜಿಲ್ಲಾ ಕ.ಸಾ.ಪ.ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಚೇತನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ, ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗಣೇಶ ಜಿ.ಮುಂತಾದವರು ಉಪಸ್ಥಿತರಿದ್ದರು.
ಮಕ್ಕಳ ಸಾಹಿತ್ಯ ವೇದಿಕೆಯ ನರಸಿಂಹ ಐತಾಳ ಸ್ವಾಗತಿಸಿ, ನಿವೃತ್ತ ಶಿಕ್ಷಕ ರಾಮಚಂದ್ರ ಐತಾಳ ಕಾರ್ಯಕ್ರಮ ನಿರೂಪಿದರು.

Related posts

Leave a Reply