Header Ads
Header Ads
Header Ads
Breaking News

ಕೋಟಿ ಚೆನ್ನಯರಿಂದ ಸಾಮಾಜಿಕ ಬದಲಾವಣೆ ಧಾರ್ಮಿಕ ಸಭೆಯಲ್ಲಿ ಸಚಿವ ರಮಾನಾಥ್ ರೈ ಹೇಳಿಕೆ

ಕೋಟಿ – ಚೆನ್ನಯರು ವರ್ತಮಾನದ ಸಾಮಾಜಿಕ ಬದಲಾವಣೆಯ ಮೂಲ ಪುರುಷರು ಅವರಿಂದಾಗಿ ಸಾಮಾಜಿಕ ಬದಲಾವಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.ಮಂಗಳೂರಿನ ಕಂಕನಾಡಿ ಶ್ರೀಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಅಂಗವಾಗಿ ೨ ದಿನದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು, ದ್ವೇಷ ,ಅಸೂಯೆ, ಮತಿಯವಾದ ಬಿಟ್ಟು ಸಮಾಜದಲ್ಲಿ ಸೌಹಾರ್ದತೆ ಬೆಳೆಸುವತ್ತ ಕೆಲಸ ಮಾಡಬೇಕು. ಎಲ್ಲರೂ ಒಟ್ಟು ಸೇರಿ ಸುಂದರ ಸಮಾಜ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ ಎಂದು ಸಚಿವರು ಹೇಳಿದರು.ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಮಾತನಾಡಿ, ಬಿಲ್ಲವ ಸಮುದಾಯವನ್ನು ಒಗ್ಗೂಡಲು ಕೋಟಿ ಚೆನ್ನಯರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ತಿಳಿಸಿದರು.

ನಟ ನವೀನ್ ಡಿ.ಪಡೀಲ್ ಹಾಗೂ ಕ್ಷೇತ್ರದಲ್ಲಿ ದುಡಿದ ಹಲವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ , ವಿಧಾನಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕೆ.ಚಿತ್ತರಂಜನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply