Header Ads
Header Ads
Breaking News

ಕೋಟೇಶ್ವರದಲ್ಲಿ ಯುವಕ ಆತ್ಮಹತ್ಯೆ ಪ್ರಕರಣ: ಶೋಭಾ ಕರಂದ್ಲಾಜೆ ಭೇಟಿ

 

ಕುಂದಾಪುರ: ಡೆತ್‌ನೋಟ್‌ನಲ್ಲಿ ಉಗ್ರ ಸಂಘಟನೆಯೊಂದರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಕೋಟೇಶ್ವರದ ಮಾರ್ಕೋಡು ಬೊಬ್ಬರ್ಯಮಕ್ಕಿಯ ವಿವೇಕ್ ಮನೆಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಹೆತ್ತವರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ, ವಿವೇಕ್ ಆತ್ಮಹತ್ಯೆ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿವೇಕ್ ಸಾಯುವ ಮೊದಲು ಬರೆದಿಟ್ಟ ಡೆತ್‌ನೋಟ್‌ನಲ್ಲಿ ಭಯೋತ್ಪಾದಕ ಸಂಘಟನೆಯೊಂದು ಕಿರುಕುಳ ನೀಡುತ್ತಿದ್ದು, ಕೊಲೆ ಬೆದರಿಕೆಯೂ ಹಾಕಿದೆ ಎಂದು ಉಲ್ಲೇಖಿಸಿದ್ದಾನೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಮೃತ ವಿವೇಕ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಕುರಿತು ಗೃಹಮಂತ್ರಿಯವರಲ್ಲಿ ಮಾತನಾಡುತ್ತೇನೆ ಎಂದರು.ವಿವೇಕ್ ಮಾಹಿತಿ ನೀಡಿರುವ ಸಂಘಟನೆ ಯಾವುದು. ಅದು ಎಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ಇದರ ಮೂಲ ಯಾವುದು ಎನ್ನುವುದನ್ನು ತಿಳಿದುಕೊಳ್ಳಲು ಬೆಂಗಳೂರು ಹಾಗೂ ದೆಹಲಿಯಲ್ಲಿ ಪ್ರಯತ್ನ ಮಾಡುತ್ತೇನೆ ಎಂದರು.ಈ ವೇಳೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ಪೂಜಾರಿ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Related posts

Leave a Reply