Header Ads
Header Ads
Breaking News

ಕೋಟ ಜೋಡಿ ಕೊಲೆ ಪ್ರಕರಣ : ಕೋಟದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ

ಕೋಟದಲ್ಲಿ ನಡೆದ ಅಮಾಯಕ ಯುವಕರ ಜೋಡಿ ಕೊಲೆ ವಿರುದ್ಧ ಹಾಗೂ ಕೊಲೆಯಲ್ಲಿ ಭಾಗಿಯಾದ ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಘವೇಂದ್ರ ಕಾಂಚನ್‌ರ ರಾಜೀನಾಮೆಗೆ ಆಗ್ರಹಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಕೋಟದಲ್ಲಿ ನಡೆದ ಡಬಲ್ ಮರ್ಡರ್ ಎಲ್ಲರನ್ನು ತಲೆತಗ್ಗಿಸುವಂತೆ ಮಾಡಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಆನಂತರ ಮಾತನಾಡಿದ ಕಾರ್ಕಳದ ಮಾಜಿ ಶಾಸಕರಾದ ಗೋಪಾಲ ಭಂಡಾರಿ ಅವರು, ಇಬ್ಬರು ಯುವಕರ ಕೊಲೆ ಅವಿಭಜಿತ ಜಿಲ್ಲೆಯನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ. ಇದೀಗ ಕೊಲೆ ಆರೋಪಿಗಳಿಗೆ ಸಹಾಯ ಮಾಡುವಂತಹ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಈ ಸಂದರ್ಭ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

Leave a Reply