Header Ads
Header Ads
Breaking News

ಕೋಟ ಡಬ್ಬಲ್ ಮರ್ಡರ್‌ಗೆ ಪೊಲೀಸ್ ನಂಟು : ಡಿಎಆರ್‌ನ ಇಬ್ಬರು ಕಾನ್ ಸ್ಟೇಬಲ್‌ಗಳ ಬಂಧನ

ಕೋಟದ ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಇತ್ತೀಚೆಗೆ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ಪವನ್ ಅಮಿನ್ ಮತ್ತು ವೀರೇಂದ್ರ ಆಚಾರ್ಯ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರನ್ನು ಕೊಲೆ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಇದರೊಂದಿಗೆ ಯುವಕರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಎಂಟಕ್ಕೇರಿದೆ.

ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಶೌಚಾಲಯ ಹೊಂಡದ ವಿವಾದಕ್ಕೆ ಸಂಬಂಧಿಸಿ ಭರತ್ ಕುಮಾರ್ ಮತ್ತು ಯತೀಶ್ ಎಂಬವರನ್ನು ತಂಡವೊಂದು ಜ.26ರಂದು ಕೊಲೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಪಂ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್, ರೌಡಿಶೀಟರ್ ರಾಜಶೇಖರ ರೆಡ್ಡಿ, ಮೆಡಿಕಲ್ ರವಿ, ಹರೀಶ್ ರೆಡ್ಡಿ, ಮಹೇಶ್ ಗಾಣಿಗ, ರವಿಚಂದ್ರ ಪೂಜಾರಿ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಇಬ್ಬರು ಪೊಲೀಸ್ ಸಿಬ್ಬಂದಿಯ ಬಂಧನದೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಒಟ್ಟು ಎಂಟಕ್ಕೇರಿದೆ.

Related posts

Leave a Reply