Header Ads
Header Ads
Breaking News

ಕೋಡಿಂಬಾಡಿಯಲ್ಲಿ ರಸ್ತೆಗುರುಳಿದ ಮರ-ವಿದ್ಯುತ್ ಕಂಬ

ಇಂದು ಬೆಳಿಗ್ಗೆ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ವಿದ್ಯುತ್ ಕಂಬಗಳು ಕೂಡ ಮರದೊಂದಿಗೆ ರಸ್ತೆಗಡ್ಡವಾಗಿ ಉರುಳಿಬಿದ್ದರಿಂದ ಉಪ್ಪಿನಂಗಡಿ-ಪುತ್ತೂರು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬಳಿಕ ಸ್ಥಳಕ್ಕೆ ಆಗಮಿಸಿದ್ದ ಇಲಾಖಾ ಸಿಬ್ಬಂದಿಗಳು ತೆರವು ಕಾರ್ಯಚರಣೆ ನಡೆಸಿದರು. ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯುತ್ ಕಂಬಗಳು ಉರುಳಿದ್ದರಿಂದ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಮೊಟಕುಗೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಗಾಳಿ ಮಳೆಗೆ ಅಲ್ಲಲ್ಲಿ ದರೆ ಕುಸಿತ, ಮರಗಳು ಉರುಳಿ ಅಪಾರ ಹಾನಿ ಸಂಭವಿಸಿದೆ.

Related posts

Leave a Reply