
ಎಪ್ರಿಲ್ 24 ರಿಂದ 30 ರವರೆಗೆಎಪ್ರಿಲ್ 24 ರಿಂದ 30 ರವರೆಗೆ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದೂ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವೂ ಫೆ . 26 ರಂದು ಶ್ರೀ ದೇವಳದಲ್ಲಿ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಕೆ.ಯಸ್ ರೈಎಸ್ಟೇಟ್ ಕೋಡಿಂಬಾಡಿ ಅವರು ತಿಳಿಸಿದರು.
ಅವರು ಮಂಗಳವಾರ ಶ್ರೀ ದೇವಳದ ವಠಾರದಲ್ಲಿ ಮಾದ್ಯಮ ಮಿತ್ರರ ಮತ್ತು ಪ್ರಚಾರ ಸಮಿತಿಯ ಸಭೆಯಲ್ಲಿ ಮಾತನಾಡಿದ್ರು..ಫೆ . 26 ರಂದು ನಡೆಯುವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವೂ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದ್ದೂ, ಧಾರ್ಮಿಕ ಮುಖಂಡರಾದ ಸೀತಾರಾಮ ರೈ ಬೆಳಿಯೂರು ಗುತ್ತು ಹಾಗೂ ಉದ್ಯಮಿಗಳಾದ ಭವಿನ್ ಸೌಜನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 7 ಗಂಟೆಗೆ ಶ್ರೀ ದೇವಿಗೆ ಸಹಸ್ರ ಕುಂಕುಮಾರ್ಚನೆ ಸೇವೆಯೂ ಜರಗಲಿದ್ದೂ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗಂಗಾಧರ ಶೆಟ್ಟಿ ಮಠಂತಬೆಟ್ಟು, ಪ್ರಚಾರ ಸಮಿತಿಯ ಸಂಚಾಲಕರಾದ ಜಯಪ್ರಕಾಶ್ ಬದಿನಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.