Header Ads
Header Ads
Breaking News

ಕೋಮು ಗಲಭೆಗಳಿಗೆ ದ. ಕ; ಉಡುಪಿ ಪ್ರಯೋಗ ಶಾಲೆ, ಅಡ್ಯಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕರು ಭಾರೀ ತಯಾರಿ ನಡೆಸುತ್ತಿದ್ದು, ಪಕ್ಷದ ಬಲವರ್ಧನೆ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಪಕ್ಷದ ಮುಖಂಡರ, ಕಾರ್ಯಕರ್ತರ ಬೃಹತ್ ಮಟ್ಟದ ಸಮಾವೇಶ ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಿತು.
ಈ ಸಮಾವೇಶಕ್ಕೆ ಸಿಎಂ ಸಿದ್ದಾರಾಮಯ್ಯ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿಗರಿಗೆ ದ. ಕ; ಉಡುಪಿಗಳು ಕೋಮು ಗಲಭೆಗೆ ಪ್ರಯೋಗ ಶಾಲೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಇಲ್ಲದ ಹಾಗೆ ಮಾಡುವುದೇ ನಮ್ಮ ಗುರಿ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಇಲ್ಲಿಯ ಕೋಮು ಗಲಭೆಗೆ ಬಿಜೆಪಿ, ಎಸ್‌ಡಿಪಿಐ ಕಾರಣ ಹೊರತು ಕಾಂಗ್ರೆಸ್ ಅಲ್ಲ ಎಂದು ಕಿಡಿಕಾರಿದರು. ವೇಣುಗೋಪಾಲ್ , ಡಿಕೆ ಶಿವಕುಮಾರ್, ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಖಾದರ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply