Header Ads
Header Ads
Breaking News

ಕೋಮ್‌ಸ್ಕೋನ್ 2017 ರಾಜ್ಯ ಸಮ್ಮೇಳನ ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್‌ನಲ್ಲಿ ಆಯೋಜನೆ ಆಗಸ್ಟ್ 10ರಿಂದ 12ರವರೆಗೆ ನಡೆಯಲಿರುವ ಕಾರ್ಯಕ್ರಮ

ಮಂಗಳೂರಿನ ಕುಂಟಿಕಾನದಲ್ಲಿರುವ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ವತಿಯಿಂದ ೭ನೇ ಕರ್ನಾಟಕ ರಾಜ್ಯ ಸಮ್ಮೇಳನ ಕೋಮ್‌ಸ್ಕೋನ್ ೨೦೧೭ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ.

ಕೋಮ್‌ಸ್ಕೋನ್ ೨೦೧೭ ರಾಜ್ಯ ಸಮ್ಮೇಳನವು ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗುತ್ತಿದೆ. ಆಗಸ್ಟ್ ೧೦ರಿಂದ ೧೨ರ ವರೆಗೆ ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಇಂದು ರಾಜ್ಯದ ಸ್ನಾತಕೋತರ ವಿದ್ಯಾರ್ಥಿಗಳಿಂದ ಪೇಪರ್ ಪ್ರಸಂಟೇಶನ್ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಎಜೆ ಆಸ್ಪತ್ರೆಯ ಹೆಚ್‌ಒಡಿ ಪ್ರೊ. ಡಾ. ಮಂಜುನಾಥ್ ರೈ ಯವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ರಾಜ್ಯದ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು, ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

Leave a Reply