Header Ads
Breaking News

ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಪಾರ್ಟಿ; ವಿಡಿಯೋ ವೈರಲ್

ರಾಜ್ಯಾದ್ಯಂತ ನಿನ್ನೆ ರಾತ್ರಿ 8ಗಂಟೆಯಿಂದ ಲಾಕ್‍ಡೌನ್ ಜಾರಿಯಾಗಿದ್ರೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದಲ್ಲಿ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮೆಹೆಂದಿ ಕಾರ್ಯಕ್ರಮ ನಡೆದಿದೆ. ಮೆಹೆಂದಿ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಯುವಕರು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗ್ತಾ ಇದೆ. ಈ ಹಿನ್ನೆಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಪ್ರಸನ್ನ ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ನಿಯಮದಂತೆ 50 ಜನರು ಸೇರಿ ಮದುವೆ ಸಮಾರಂಭವನ್ನು ನಡೆಸಲು ಸ್ಥಳೀಯ ಪಂಚಾಯತ್‍ನಿಂದ ಅನುಮತಿಯನ್ನು ಪಡೆದಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರ ನೃತ್ಯದ ವಿಡಿಯೋ ಲಾಕ್ಡೌನ್ ಸಮಯದಲ್ಲೇ ನಡೆದಿರುವುದೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಲಾಕ್ಡೌನ್ ಸಮಯದಲ್ಲಿ ನಡೆದಿರುವುದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *