

ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಿದ ಹಿನ್ನಲೆ ಕಾಸರಗೋಡು-ದ.ಕ.ಜಿಲ್ಲಾಡಳಿತ ಸಭೆ ಕರೆದು ಕೋವಿಡ್ ನಿಗ್ರಹದ ಬಗ್ಗೆ ಚರ್ಚೆ ನಡೆಸಬೇಕೆಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಕಾಸರಗೋಡು ಹಾಗೂ ದ.ಕ. ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳ ಜಂಟಿ ಸಭೆ ಕರೆದು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. ಇನ್ನು ಟೋಲ್ಗೇಟ್ ನಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದರು.