Header Ads
Breaking News

ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಬಿಜೆಪಿಯ ಸಂಸ್ಕಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ

ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಬಿಜೆಪಿ ಸಂಸ್ಕಾರ ಎನ್ನುವಂತಾಗಿದೆ. ಸಾರ್ವಜನಿಕ ಲೆಕ್ಕ ಸಮಿತಿ ಸಭೆ ನಡೆಸಲು ಸರಕಾರ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ದ.ಕ ಜಿಲ್ಲೆಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿಗೆ ಭೇಟಿ ನೀಡಿದ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 30 ಜನರ ತಂಡ ಭೇಟಿ ನೀಡಲಿದೆ. ಕೋವಿಡ್ ಸಂತ್ರಸ್ತರಿಗೆ ದೈರ್ಯ ತುಂಬುವ, ಸಹಾಯ ಮಾಡುವ ನಿಟ್ಟಿನಲ್ಲಿ ಮತ್ತು ಭ್ರಷ್ಟಾಚಾರ ಬಯಲಿಗೆಳೆಯಲು ಕಾಂಗ್ರೆಸ್ ಕಾರ್ಯಪ್ರವ್ರತ್ತವಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ಅಕ್ರಮದ ಬಗ್ಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಲಿ ಎಂದು ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್, ಶಾಸಕ ಯು.ಟಿ.ಖಾದರ್ ಸೇರಿದಂತೆ ಮತ್ತಿತ್ತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *