Header Ads
Breaking News

ಕ್ರಾಂತಿಕಾರಿ ತ್ರಿವಳಿ ದೇಶಭಕ್ತರ ಬಲಿದಾನದ ಸ್ಮರಣೆ : ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಟ ಪಂಜಿನ ಮೆರವಣಿಗೆ

ಕ್ರಾಂತಿಕಾರಿ ತ್ರಿವಳಿ ದೇಶಭಕ್ತರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ಸ್ಮರಣೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾ ನಗರ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.

ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಟ ಪಂಜಿನ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ದೀಪ ಉರಿಸಿ ಚಾಲನೆ ನೀಡಿದರು. ಬಳಿಕ ಮೆರವಣಿಗೆಯು ಮುಖ್ಯ ರಸ್ತೆ, ಕೋರ್ಟು ರಸ್ತೆಯ ಮೂಲಕ ಸಾಗಿ ಅಮರ್ ಜವಾನ್ ಜ್ಯೋತಿ ಬಳಿ ಸಮಾಪನಗೊಂಡಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಬಿಜೆಪಿ ಜಿಲ್ಲಾ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಮಾತನಾಡಿ, ಮೂರು ಮಂದಿ ದೇಶ ಭಕ್ತರು ಯುವ ಸಮಾಜದ ಪ್ರೇರಣಾ ಶಕ್ತಿಗಳು ಎಂದ್ರು.ಈ ವೇಳೆ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಯುವ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ನವೀನ್ ಪಡ್ನೂರು, ನಗರ ಮಂಡಲದ ಅಧ್ಯಕ್ಷ ಸಚಿನ್ ಶೆಣೈ,ತಾಲ್ಲೂಕು ಪಂಚಾಯತ್ ಸದಸ್ಯ ಹರೀಶ್ ಬಿಜತ್ರೆ, ಮತ್ತಿತರರು ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *