Header Ads
Header Ads
Breaking News

ಕ್ಲಿಷ್ಟಕರ ಪರಿಸ್ಥಿತಿ ನಿಭಾಯಿಸಿದ ಗುಜರಾತಿ ಆಂಗ್ಲ ಮಾಧ್ಯಮ ಶಾಲೆ

ಮಂಗಳೂರಿನಲ್ಲಿ ಮಳೆಯ ಅವಾಂತರ ಹಿನ್ನೆಲೆ ಕ್ಲಿಷ್ಟಕರ ಪರಿಸ್ಥಿತಿ ನಿಭಾಯಿಸಿದ ಗುಜರಾತಿ ಆಂಗ್ಲ ಮಾಧ್ಯಮ ಶಾಲೆ .ಶಾಲಾ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಶಾಲಾ ಶಿಕ್ಷಕ-ರಕ್ಷಕ ಸಂಘ ಕುಂಭದ್ರೋಣ ಮಳೆಯಿಂದಾಗಿ ಉಂಟಾದ ಕ್ಲಿಷ್ಟಕರ ಪರಿಸ್ಥಿತಿಯನ್ನು ನಿರ್ವಹಿಸಿದ ಗುಜರಾತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯಿನಿ, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿಯವರನ್ನು ಶಾಲಾ ಪೋಷಕ ವೃಂದದ ಪರವಾಗಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಆಶಾ, ಸದಸ್ಯರುಗಳಾದ ಭಾವಿಕಾ ಮತ್ತು ರಜನಿ ಪುಷ್ಪ ಕೃತಜ್ಞತೆ ಸಲ್ಲಿಸಿದರು. ಮುಖ್ಯೋಪದ್ಯಾಯಿನಿ ಅಶ್ವಿನಿ ಶೆಣೈ ಕ್ಲಪ್ತ ಸಮಯದಲ್ಲಿ ಪರಿಸ್ಥಿತಿ ನಿಭಾಯಿಸಲು ಸಹಕರಿಸಿದ ಆಡಳಿತ ಮಂಡಳಿ, ಅಗ್ನಿ ಶಾಮಕ ದಳ ಪೊಲೀಸ್ ಸಿಬ್ಬಂದಿ ಸ್ಥಳೀಯ ಕಾರ್ಪೊರೇಟರ್ ಹಾಗೂ ಸ್ಥಳೀಯ ನಾಗರಿಕರನ್ನು ಮುಕ್ತ ಮನಸ್ಸಿನಿಂದಶ್ಲಾಘಿಸಿದರು.

Related posts

Leave a Reply