Header Ads
Header Ads
Breaking News

ಕ್ವಿಟ್ ಇಂಡಿಯಾ ಚಳುವಳಿ ಆಚರಣೆ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಕಾರ್ಯಕ್ರಮ

 

ಕ್ವಿಟ್ ಇಂಡಿಯಾ ಚಳುವಳಿಗೆ ೭೫ ವರ್ಷ ಸಂದಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ಮಾತನಾಡಿ ಕ್ವಿಟ್ ಇಂಡಿಯಾ ಚಳುವಳಿ ಆಚರಿಸುವುದು ಸೂಕ್ತವಾಗಿದೆ ಯಾಕೆಂದರೆ ಸಾತಂತ್ರ್ಯಕ್ಕಾಗಿ ಅದೇಷ್ಟೋ ಬಂದಿ ಬಲಿದಾನವಾಗಿದ್ದಾರೆ. ಅನೇಕ ಮಹಾತ್ಮರು ಈ ಚಳುವಳಿಯಲ್ಲಿ ಪಾಲ್ಗೊಂಡಿದ್ದಾರೆ. ಅವರನ್ನು ನೆನಪಿಸುವಂತ ದಿನ ಇದಾಗಿದೆ ಎಂದು ಹೇಳಿದರು.

ಅನಂತರ ಸಚಿವ ರಮಾನಾಥ ರೈ ಅವರು ಮಾತನಾಡಿ ದೇಶದಾದ್ಯಂತ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ಣಯದಂತೆ ಎಲ್ಲಾ ಪ್ರದೇಶ ಸಮಿತಿಯ ಸೂಚನೆಯ ಪ್ರಕಾರ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ ಎಂದ ಅವರು, ಕ್ವಿಟ್ ಇಂಡಿಯಾ ಹೋರಾಟದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಐವನ್ ನಿಡ್ಲೆ, ಜಿಲ್ಲಾಧ್ಯಕ್ಷರು ಹರೀಶ್ ಕುಮಾರ್ , ಕಳ್ಳಿಗೆ ತಾರನಾಥ್ ಕೋಡಿಜಾಲ್ ಇಬ್ರಾಹಿಂ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ವರದಿ: ಶರತ್

Related posts

Leave a Reply