Header Ads
Breaking News

ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಕೊಲೆ

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ತಾರಕಕ್ಕೇರಿ ಪಂಚಾಯತ್ ಸದಸ್ಯನ ಕೊಲೆಯಲ್ಲಿ ಅಂತ್ಯವಾದ ಘಟನೆನಗರದ ಹೊರವಲಯದ ಅಡ್ಯಾರು ಪದವು ಎಂಬಲ್ಲಿ ಶುಕ್ರವಾರ ನಡೆದಿದೆ. ಅಡ್ಯಾರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಯಾಕೂಬ್ ಎಂಬಾತ ಕೊಲೆಯಾದ ವ್ಯಕ್ತಿ.

ಅಡ್ಯಾರ್ ಪದವು ಎಂಬಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಯಾಕೂಬ್ ನನ್ನು ನೆಲಕ್ಕೆ ದೂಡಿ ಹಾಕಿ ಎದೆಗೆ ಒದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯಾಕೂಬ್ ನನ್ನು ಆಟೋ ರಿಕ್ಷಾದಲ್ಲಿ ತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವೈಯಕ್ತಿಕ ದ್ವೇಷ ಅಥವಾ ರಾಜಕೀಯ ಪ್ರೇರಿತ ದ್ವೇಷ ಕಾರಣದಿಂದ ನಡೆಸಿಬರಬಹುದು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ಆರಂಭಿಸಿದ್ದಾರೆ.

Related posts

Leave a Reply

Your email address will not be published. Required fields are marked *