Header Ads
Breaking News

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಮಾರಕಾಯುಧದಿಂದ ಹಲ್ಲೆ: ವಿಟ್ಲದ ನೀರ್ಕಜೆ ಬಸ್ ನಿಲ್ದಾಣದಲ್ಲಿ ನಡೆದ ಘಟನೆ

ವಿಟ್ಲ: ಕ್ಷುಲ್ಲಕ ಕಾರಣಕ್ಕೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವ್ಯಕ್ತಿಯೊಬ್ಬರಿಗೆ ಮಾರಕಾಯುಧದಿಂದ ದಾಳಿ ನಡೆಸಿ, ಇರಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನೀರ್ಕಜೆ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದಿದೆ.


ನೀರ್ಕಜೆ ನಿವಾಸಿ ನವೀನ್(26) ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಬಸ್ ನಿಲ್ದಾಣದಲ್ಲಿ ಇದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರ ತಂಡದಿಂದ ಮಾರಕಾಯುಧದಿಂದ ದಾಳಿ ನಡೆದಿದೆ. ಪೂರ್ವ ದ್ವೇಷವೇ ಘಟನೆ ಕಾರಣ ಎನ್ನಲಾಗಿದೆ.
ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ಇನ್‍ಸ್ಪೆಕ್ಟರ್ ನಾಗರಾಜ ಟಿ. ಡಿ., ವಿಟ್ಲ ಎಸೈ ವಿನೋದ್ ಎಸ್. ಕೆ. ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಬಗ್ಗೆ ಪ್ರಕರಣ ದಾಖಲಾಗಿದೆ.

 

Related posts

Leave a Reply

Your email address will not be published. Required fields are marked *