Header Ads
Header Ads
Breaking News

ಖಜಾನೆ ಖಾಲಿಯಾದ ಬಿಜೆಪಿಗರಿಂದ ಕೆಲಸ ನಿರೀಕ್ಷೆ ಸಾಧ್ಯವೇ? : ಮಾಜಿ ಸಚಿವ ರಮಾನಾಥ ರೈ

ನೆರೆ ಪರಿಹಾರ ನೀಡಲು ಸಾಧ್ಯವಾಗದೆ ಖಜಾನೆ ಖಾಲಿಯಾಗಿದೆ ಎಂದು ಹೇಳುತ್ತಿರುವ ಬಿಜೆಪಿ ಸರಕಾರದಿಂದ ಅಭಿವೃದ್ಧಿ ಕೆಲಸ ನಿರೀಕ್ಷೆ ಸಾಧ್ಯವೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಲ್ಲಿದ್ದಾಗ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಧ್ಯವಾಗಿದೆ. ಆದರೆ ಬಿಜೆಪಿ ಸರಕಾರದಿಂದ ನೆರೆಗೂ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ನಗರದ ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ತುಂಬೆ ಅಣೆಕಟ್ಟು ರಚನೆ, ಒಳಚರಂಡಿ ಕಾಮಗಾರಿ, ನಗರದ ಪ್ರಮುಖ ರಸ್ತೆಗಳ ಕಾಂಕ್ರಿಟೀಕರಣ, ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ, ಸುರತ್ಕಲ್‍ನಲ್ಲಿ ಮಾದರಿ ಮಾರುಕಟ್ಟೆ ನಿರ್ಮಾಣ, ಲೇಡಿಗೋಶನ್ ಹಾಗೂ ವೆನ್‍ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ, ಪಡೀಲ್‍ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವಾರು ಯೋಜನೆಗಳು ಆಗಿವೆ. ಜನತೆ ಈ ಅಭಿವೃದ್ದಿ ಕಾರ್ಯಗಳನ್ನು ಗಮನಿಸಿ ಮತ್ತೊಮ್ಮೆ ಕಾಂಗ್ರೆಸ್‍ಗೆ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು.

Related posts

Leave a Reply

Your email address will not be published. Required fields are marked *