Header Ads
Breaking News

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಪಟ್ಟಿ ಬಿಡುಗಡೆಗೊಳಿಸಿ : ಐವನ್ ಡಿಸೋಜಾ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‍ಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೇಳಿಕೆ ನೀಡಿದ್ದು, ಇದರಿಂದ ಜನರು ಗೊಂದಲದಲ್ಲಿದ್ದಾರೆ. ಈ ಬಗ್ಗೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಬಗ್ಗೆ ಕೂಡಲೇ ಜಿಲ್ಲಾಡಳಿತ ಪಟ್ಟಿ ಬಿಡುಗಡೆ ಮಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ರು. ಕೋವಿಡ್‍ನಿಂದ ಬಳಲುತ್ತಿರುವ ಜನತೆಗೆ ತುರ್ತು ಚಿಕಿತ್ಸೆ ಬೇಕಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ದಿನಕ್ಕೆ 10ರಿಂದ 30 ಸಾವಿರ ಖರ್ಚಾಗುತ್ತಿದೆ. ಈ ಕಾರಣದಿಂದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಉಚಿತ ನೀಡುವ ಆಸ್ಪತ್ರೆಗಳ ವಿವರ ನೀಡಬೇಕು. ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಹೆಲ್ಫ್ ಡೆಸ್ಕ್ ಆರಂಭಿಸಬೇಕೆಂದು ಒತ್ತಾಯಿಸಿದ್ರು.

Related posts

Leave a Reply

Your email address will not be published. Required fields are marked *