Header Ads
Breaking News

ಖಾಸಗಿ ಆಸ್ಪತ್ರೆಗಳು ಹಣ ದೋಚುವ ದಂಧೆ ಶುರು ಮಾಡಿದೆ : ಎಸ್‍ಡಿಪಿಐ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಅಬ್ದುಲ್ ಮಜಿದ್ ಆರೋಪ

ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಮ್ಮ ರಾಜ್ಯದಲ್ಲೂ ರೋಗವು ವ್ಯಾಪಕವಾಗಿ, ಸಾಮುದಾಯಿಕವಾಗಿ ಹರಡುತ್ತಿದೆ. ಇದೇ ಸಮಯದಲ್ಲಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಚಿಕಿತ್ಸೆಗೆ ಅನುಮತಿ ನೀಡಿದ ಬಳಿಕ ಖಾಸಗಿ ಆಸ್ಪತ್ರೆಗಳು ಹಣ ದೋಚುವ ದಂಧೆ ಶುರು ಮಾಡಿದ್ದಾರೆ ಎಂದು ಎಸ್‍ಡಿಪಿಐ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಅಬ್ದುಲ್ ಮಜಿದ್ ಆರೋಪಿಸಿದ್ರು.
ಅವರು ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಕೋವಿಡ್ ಪರೀಕ್ಷೆಗಾಗಿ ರೋಗಿಗಳಿಗೆ ದಿವಸಕ್ಕೆ 15ರಿಂದ 20 ಸಾವಿರ ದುಬಾರಿ ಬೆಲೆ ಹಾಕಿ ಕೊರೊನಾ ವ್ಯಾಪಾರ ನಡೆಸುತ್ತಿದ್ದಾರೆ. ಇನ್ನು ಕೆಲವು ಪ್ರಕರಣಗಳಲ್ಲಿ ಆಸ್ಪತ್ರೆಯಲ್ಲಿ ನೆಗೆಡಿವ್ ವರದಿ ನೀಡಿ ಡಿಸ್ಚಾರ್ಜ್ ಮಾಡಿ ಮನೆಗೆ ಕಳಿಸಿದ ನಂತರ ಮತ್ತೆ ಕರೆ ಮಾಡಿ ನಿಮ್ಮ ವರದಿ ಪಾಸಿಟಿವ್ ಬಂದಿದೆ ಆಂಬುಲೆನ್ಸ್ ಕಳಿಸ್ತೇವೆ ತಯಾರಾಗಿ ಎಂಬಂತಹ ಪ್ರಕರಣ ಕೂಡಾ ನಡೆದಿದೆ. ಇದರಿಂದಾಗಿ ರೋಗಿಗಳು ಆಸ್ಪತ್ತೆಗಳಿಗೆ ಹೋಗಲು ಭಯಪಟ್ಟು, ಮನೆಯಲ್ಲೇ ಉಳಿದು ಜೀವ ಹೋದರೂ ಪರವಾಗಿಲ್ಲ ಅನ್ನುವ ಪರಿಸ್ಥಿತಿ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ರು. ಈ ಸಂದರ್ಭ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಾಹುಲ್ ಹಮೀದ್, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *