Header Ads
Breaking News

ಖಾಸಗಿ ಬಸ್ ಮತ್ತು ಮರಳು ಸಾಗಾಟದ ಟಿಪ್ಪರ್ ನಡುವೆ ಅಪಘಾತ : ವಿದ್ಯಾರ್ಥಿಗಳು ಸಹಿತ ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ

ಖಾಸಗಿ ಬಸ್ ಮತ್ತು ಮರಳು ಸಾಗಾಟದ ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳು ಹಾಗೂ ಬಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಲೆತೋಡು ಎಂಬ ಖಾಸಗಿ ಮಂಗಳೂರಿನತ್ತ ತೆರಳುತ್ತಿದ್ದರೆ ಎದುರಿನಿಂದ ಬರುತ್ತಿದ್ದ ಮರಳು ಸಾಗಾಟದ ಟಿಪ್ಪರ್‌ಗೆ ಮುಖಾಮುಖಿ ಢಿಕ್ಕಿಯಾಗಿದೆ. ಈ ವೇಳೆ ಬಸ್ಸಿನಲ್ಲಿ ಸಾಕಷ್ಟು ಪ್ರಯಾಣಿಕರಿದ್ದು, ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಚಾಲಕನಿಗೂ ಗಾಯಗಳಾಗಿವೆ. ಅಪಘಾತದ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *