Header Ads
Breaking News

ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ : ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ, ಪಿತೂರಿ ಇರುವುದು ಸ್ಪಷ್ಟವಾಗಿದೆ. ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನ, ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಿ ನಾಶಪಡಿಸಿದವರನ್ನು ಕೂಡಲೇ ಬಂಧಿಸಲಾಗುವುದು. ಯಾರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು.ಮಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅನಗತ್ಯ ಗೊಂದಲ ಸೃಷ್ಟಿಸುವುದನ್ನು ನಿಲ್ಲಿಸಬೇಕು. ಕರಾವಳಿಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Related posts

Leave a Reply

Your email address will not be published. Required fields are marked *