Header Ads
Breaking News

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ : ಬಂಟ್ವಾಳ ಪುರಸಭೆ ವತಿಯಿಂದ ಆಯೋಜನೆ

ಬಂಟ್ವಾಳ: ಗಾಂಧಿ ಜಯಂತಿಯ ಪ್ರಯುಕ್ತ ಬಂಟ್ವಾಳ ಪುರಸಭೆ ವತಿಯಿಂದ ಜೇಸಿಐ ಬಂಟ್ವಾಳದ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ಬಂಟ್ವಾಳದ ಬಡ್ಡಕಟ್ಟೆಯಲ್ಲಿ ನಡೆಯಿತು.ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರ ನೇತೃತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪುರಸಭೆಯ ವಾಣಿಜ್ಯ ಸಂಕೀರ್ಣ ಹಾಗೂ ಬಸ್ಸು ನಿಲ್ದಾಣವನ್ನು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಪುರಸಭೆಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಕಚೇರಿ ವ್ಯವಸ್ಥಾಪಕಿ ಲೀಲಾವತಿ, ಜೇಸಿಐ ಬಂಟ್ವಾಳದ ಅಧ್ಯಕ್ಷ ಸದಾನಂದ ಬಂಗೇರ, ನಿಯೋಜಿತ ಅಧ್ಯಕ್ಷ ಉಮೇಶ್ ಮೂಲ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *