Header Ads
Header Ads
Breaking News

ಗಾಂಧಿ ಹತ್ಯೆ ಘಟನೆಯ ಮರುಸೃಷ್ಠಿಸಿ-ಸಂಭ್ರಮಾಚರಣೆ : ಪುತ್ತೂರಿನಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ

ಪುತ್ತೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹತ್ಯೆಯ ಘಟನೆಯನ್ನು ಮರುಸೃಷ್ಠಿಸಿ ಸಂಭ್ರಮಾಚರಿಸಿದ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಗಾಂಧೀ ಕಟ್ಟೆಯ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಅವರು ,ನಕಲಿ ಪಿಸ್ತೂಲ್ ಮೂಲಕ ಮಹಾತ್ಮಾ ಗಾಂಧಿ ಪ್ರತಿಕ್ರತಿಗೆ ಗುಂಡು ಹಾರಿಸಿ ಗಾಂಧಿ ಹತ್ಯೆಯನ್ನು ಶೌರ್ಯ ದಿನಾಚರಣೆಯಾಗಿ ಆಚರಿಸುವ ಮೂಲಕ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ಸಂಘಟನೆಯ ಕಾರ್ಯಕರ್ತರು ಗೋಡ್ಸೆ ಸಂತತಿ ಇನ್ನೂ ಜೀವಂತವಾಗಿದೆ ಎಂಬ ಸಂದೇಶ ಸಾರಿದ್ದಾರೆ. ಇದು ಸ್ವತಂತ್ರ ಭಾರತದ ಮೊದಲ ಭಯೋತ್ಪಾದನೆಯಾಗಿದೆ ಎಂದರು.

ಈ ಸಂದರ್ಭ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಕೆ.ಎ.ಸಿದ್ದೀಕ್,ಕಾರ್ಯದರ್ಶಿ ಹಮೀದ್ ಮೆಜೆಸ್ಟಿಕ್,ಉಪಾಧ್ಯಕ್ಷ ಇಬ್ರಾಹಿಂ ಸಾಗರ್, ಜತೆ ಕಾರ್ಯದರ್ಶಿ ಅಶ್ರಫ್ ಬಾವು, ಮತ್ತಿತರರು ಹಾಜರಿದ್ದರು.
ವರದಿ: ಅನೀಶ್ ಪುತ್ತೂರು

Related posts

Leave a Reply