Header Ads
Breaking News

ಗುರುಪುರ:ಖಾಸಗಿ ಬಸ್‌ಗೆ ಬೈಕ್ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಖಾಸಗಿ ಬಸ್ಸೊಂದು ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಗುರುಪುರದಲ್ಲಿ ನಡೆದಿದೆ. ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಬಳಿ ಈ ಅಪಘಾತ ಸಂಭವಿಸಿದೆ. ಕಾರ್ಕಳದಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಅದೇ ರಸ್ತೆಯಲ್ಲಿ ಬೆಳುವಾಯಿಯಿಂದ ಮಂಗಳೂರಿನತ್ತ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಅತೀ ವೇಗದಲ್ಲಿದ್ದ ಬಸ್ ಮೊದಲು ಪಿಕಪ್ ವಾಹನವೊಂದಕ್ಕೂ ಢಿಕ್ಕಿಯಾಗಿದೆ. ಬಳಿಕ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Reply

Your email address will not be published. Required fields are marked *