Header Ads
Breaking News

ಗೋಮಾತೆಯ ಶಾಪಕ್ಕೆ ಬಲಿಯಾಗಿ ಕಾಂಗ್ರೆಸ್ ಸರ್ಕಾರನೂ ಹೋಯಿತು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದವಿ ಕಳೆದುಕೊಂಡರು : ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ಬಂಟ್ವಾಳ: ಗೋಕಳ್ಳರಿಗೆ ಬೆಂಬಲ ನೀಡಿದ ಪರಿಣಾಮ ಗೋಮಾತೆಯ ಶಾಪಕ್ಕೆ ಬಲಿಯಾಗಿ ಕಾಂಗ್ರೆಸ್ ಸರ್ಕಾರನೂ ಹೋಯಿತು, ಸಿದ್ಧರಾಮಯ್ಯ ಮುಖ್ಯಮಂತ್ರಿ ಪದವಿಯನ್ನೇ ಕಳೆದುಕೊಂಡರು, ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಸೋಲುವಂತಾಯಿತು ಎಂದು ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಬಂಟ್ವಾಳದ ಬಂಟರ ಭವನದಲ್ಲಿ ನಡೆದ ಜನಸೇವಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ವಾಗ್ದಾಳಿ ಮಾಡಿದರು. ನಳೀನ್ ಕುಮಾರ್ ಕಟೀಲು ಬಿಜೆಪಿ ರಾಜಾಧ್ಯಕ್ಷರಾದ ಬಳಿಕ ಪ್ರತಿನಿತ್ಯ ಸಿದ್ಧರಾಮಯ್ಯನವರ ಕನಸಿನಲ್ಲಿ ನಳಿನ್ ಕುಮಾರ್ ಕಟೀಲು ಬರುತ್ತಿದ್ದಾರೆ, ಆ ಹಂತದಲ್ಲಿ ನಳಿನ್‍ಕುಮಾರ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. 2 ಪಂಚಾಯತಿ ಗೆದ್ದ ಪಕ್ಷ ಪಾಕಿಸ್ಥಾನಕ್ಕೆ ಜೈಕಾರ ಹಾಕುವ ದೇಶದ್ರೋಹದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಛಾದ ಅಧ್ಯಕ್ಷ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯ ಎಂ.ಎನ್. ರವಿಕುಮಾರ್, ಶಾಸಕರಾದ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ರಾಜೇಶ್ ನಾಕ್, ಎಸ್.ಅಂಗಾರ, ಹರೀಶ್ ಪೂಂಜ, ಡಾ. ವೈ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಪ್ರತಾಪ ಸಿಂಹ ನಾಯಕ್, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *