Header Ads
Header Ads
Breaking News

ಬಂಟ್ವಾಳ : ಗ್ಯಾಸ್ ಟ್ಯಾಂಕರ್-ಕಾರು ನಡುವೆ ಭೀಕರ ಅಪಘಾತ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಹಾಗೂ ಟೂರಿಸ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಸಮೀಪ ಇದೀಗ ಸಂಭವಿದೆ.ಮೃತಪಟ್ಟವರು ಭಟ್ಕಳ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಪೊಲೀಸರಿಂದ ಇನ್ನಷ್ಟೇ ಬರಬೇಕಾಗಿದೆ. ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ತಲಪಾಡಿ – ಬ್ರಹ್ಮರಕೂಟ್ಲು ಮೇಲ್ಸೆತುವೆ ಸಮೀಪ ಢಿಕ್ಕಿಯಾಗಿದೆ.
ಘಟನೆಯಿಂದ ನಾಲ್ವರು ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ತಾಸುಗಳ ಕಾಲ ಸಂಚಾರಕ್ಕೆ ಉಂಟಾಗಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

Related posts

Leave a Reply

Your email address will not be published. Required fields are marked *