Header Ads
Header Ads
Breaking News

ಗ್ರಾಮೀಣ ಪ್ರದೇಶದ ರಸ್ತೆ ಹಂತ ಹಂತವಾಗಿ ಕಾಂಕ್ರೀಟೀಕರಣ ಪಾವಂಜೆಯಲ್ಲಿ ಜಿ.ಪಂ. ಸದಸ್ಯ ವಿನೋದ್ ಕುಮಾರ್ ಹೇಳಿಕೆ

ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಹಂತ ಹಂತವಾಗಿ ಕಾಂಕ್ರೀಟೀಕರಣಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಹೇಳಿದರು. ಅವರು ಪಾವಂಜೆ ಕೊಳುವೈಲುನಲ್ಲಿ ಜಿಲ್ಲಾ ಪಂಚಾಯತ್‌ನ 4.30 ಲಕ್ಷ ಹಾಗೂ ತಾಲೂಕು ಪಂಚಾಯತ್‌ನ 1 ಲಕ್ಷ ಅನುದಾನಗಳಿಂದ ಕಾಂಕ್ರೀಟೀಕರಣಗೊಂಡ ರಸ್ತೆ ಉದ್ಘಟನಾ ಸಮಾರಂಭದಲ್ಲಿ ಮಾತನಾಡಿದರು, ಮುಂದಿನ ದಿನದಲ್ಲಿ ನೀರು ಮತ್ತು ಇನ್ನಿತರ ಮೂಲಭೂತ ಸೌಕರ್ಯದ ಬಗ್ಗೆ ಗಮನ ಹರಿಸಲಾಗುವುದು, ಅಭಿವೃದ್ದಿಯಲ್ಲಿ ನಾವು ಯಾವುದೇ ರಾಜಕೀಯ ಮಾಡುವುದಿಲ್ಲ ಎಂದರು.

ಸತೀಶ್ ರಾವ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್ ಕಾಮರೊಟ್ಟು, ಸತೀಶ್ ಭಟ್ ಕೊಳುವೈಲು, ಭಾಜಪ ಗ್ರಾಮ ಸಮಿತಿ ಅಧ್ಯಕ್ಷ ನರೇಂದ್ರ ಫ್ರಭು ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.
ವರದಿ: ನಿಶಾಂತ್ ಮುಲ್ಕಿ

Related posts