Header Ads
Breaking News

ಗ್ರಾಮೀಣ ಭಾಗದಲ್ಲಿ ಸಿಗುತ್ತಿಲ್ಲ ಅನ್‍ಲೈನ್ ಕ್ಲಾಸ್ : ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗೆ ಬೇಕಾದ ವ್ಯವಸ್ಥೆ ಇಲ್ಲ

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಆನ್‍ಲೈನ್ ತರಗತಿಗಳು ಆರಂಭಗೊಂಡಿವೆ. ಸರ್ಕಾರ ಆನ್‍ಲೈನ್ ತರಗತಿಗೆ ಉತ್ತೇಜನ ನೀಡಬೇಕು ಎಂದು ಹೇಳುತ್ತಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ವಾಸ್ತವದಲ್ಲಿ ಪರಿಸ್ಥಿತಿ ಬೇರೆಯೇ ಇದೆ. ಉದಾಹರಣೆಗೆ ಈ ಸ್ಟೋರಿ ನೋಡಿ.

ಕಲಿಕೆಯಲ್ಲಿ ಮುಂದಿರುವ ಈ ಬಾಲಕನ ಹೆಸರು ವರುಣ್. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ನಿವಾಸಿ. ಎಲ್ಲಾ ವಿದ್ಯಾರ್ಥಿಗಳಂತೆ ತಾನೂ ಕಲಿತು ತನ್ನ ಕುಟುಂಬಕ್ಕೆ,ಅನಾರೋಗ್ಯ ಪೀಡಿತ ತಂದೆಗೆ ಆಸರೆಯಾಗಬೇಕು ಎಂಬುದು ಈತನ ಅಭಿಲಾಷೆ. ಆದರೆ ತನ್ನ ಕುಟುಂಬದ ಬಡತನ ಇದಕ್ಕೆ ಆಸ್ಪದ ನೀಡುತ್ತಿಲ್ಲ.ವರುಣ್ ತಂದೆ ಮೋನಪ್ಪ ಕುಂಬಾರರು ಮೋದಲೇ ಅನಾರೋಗ್ಯ ಪೀಡಿತರು.ತಾಯಿ ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ತಂಗಿಯೋರ್ವರು ಎಂಟನೇ ತರಗತಿ ಓದುತ್ತಿದ್ದಾರೆ.ಬಡತನದಲ್ಲಿ ದಿನದೂಡುತ್ತಿರುವ ವರುಣ್ ಮನೆಯಲ್ಲಿ ಆನ್ಲೈನ್ ತರಗತಿಗೆ ಬೇಕಾದ ಒಂದು ಟಿವಿಯಾಗಲೀ, ಸ್ಮಾರ್ಟ್ ಪೊನ್ ಆಗಲೀ ಇಲ್ಲ. ಇಷ್ಟು ಮಾತ್ರವಲ್ಲದೇ ಇವರಿಗೆ ವಾಸಕ್ಕೆ ಒಂದು ಸರಿಯಾದ ಮನೆಯಾಗಲೀ,ಶೌಚಾಲಯವಾಗಲೀ ಇಲ್ಲ. ಎಲ್ಲಾ ಮಕ್ಕಳು ಟಿವಿ, ಮೊಬೈಲ್ ಮೂಲಕ ಶಿಕ್ಷಣ ಪಡೆಯುತ್ತಿರಬೇಕಾದರೆ ಈ ಮಕ್ಕಳು ಮತ್ತು ಇವರ ಪೊಷಕರು ತಮ್ಮ ಭವಿಷ್ಯದ ಬಗ್ಗೆ ಚಿಂತೆಯಲ್ಲಿದ್ದಾರೆ.

ಒಟ್ಟಿನಲ್ಲಿ ಸರ್ಕಾರವು ಗ್ರಾಮೀಣ ಭಾಗದ ಈ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮೀಣ ಭಾಗದ ಮಕ್ಕಳ ಭವಿಷ್ಯದ ಕುರಿತಾಗಿಯೂ ಚಿಂತಿಸಬೇಕಾಗಿದೆ.ಮಾತ್ರವಲ್ಲದೆ ಸಹೃದಯ ದಾನಿಗಳು ಈ ಕುಟುಂಬಕ್ಕೆ ನೆರವು ನೀಡುವ ಮೂಲಕ ಈ ಮಕ್ಕಳ ಬಾಳಿಗೆ ಬೆಳಕಾಗಬೇಕಿದೆ.

Related posts

Leave a Reply

Your email address will not be published. Required fields are marked *