Header Ads
Breaking News

ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ವ್ಯವಸ್ಥೆ ; ಬಂಟ್ವಾಳದ ಉನ್ನತೀ ಸೌಧದಲ್ಲಿ ನಡೆದ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ವ್ಯವಸ್ಥೆಯ ಶಿಕ್ಷಣ ತಾಣ ಕಾರ್ಯಕ್ರಮ ಬಂಟ್ವಾಳದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉನ್ನತೀ ಸೌಧದಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ಲ್ಯಾಪ್ ಟಾಪ್ ವಿತರಿಸಿದರು. ಅವರು ಮಾತನಾಡಿ ತಂತ್ರಜ್ಞಾನಕ್ಕೆ ಹಳ್ಳಿ ಮಕ್ಕಳು ಒಗ್ಗಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾದರಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎ.ಸಿ.ಭಂಡಾರಿ, ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಯೋಜನಾಧಿಕಾರಿ ಜಯಾನಂದ ಪಿ. ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *