Header Ads
Header Ads
Breaking News

ಚಲಿಸುತ್ತಿದ್ದ ವೇಳೆ ಟೈರ್ ಸಿಡಿದ ಪರಿಣಾಮ ಖಾಸಗಿ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್-ಅರ್ಕುಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಅರ್ಕುಳ ಬಳಿ ಬರುತ್ತಿದ್ದಂತೆ ಟೈರ್ ಸಿಡಿದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಕಾರಿನ ಮೇಲೆಯೇ ಉರುಳಿಬಿದ್ದಿದೆ. ಇದರಿಂದ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಹಲವರಿಗೆ ಗಾಯಗಳಾಗಿವೆ.

ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ಬಸ್ ಕೂಡಾ ಜಖಂಗೊಂಡಿದೆ. ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

Leave a Reply