Header Ads
Header Ads
Breaking News

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸಿಟಿಬಸ್ ಪಲ್ಟಿ ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಘಟನೆ 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸಿಟಿಬಸ್ಸೊಂದು ಪಲ್ಟಿಯಾದ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಸಂಭವಿಸಿದೆ. ಮಂಗಳೂರಿನ ಕಾಟಿಪಳ್ಳದಿಂದ ಮಂಗಳೂರಿನತ್ತ ಆಗಮಿಸುತ್ತಿದ್ದ ಬಸ್ ಎದುರಿನಿಂದ ವಾಹನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಬೈಕಂಪಾಡಿ ಜಂಕ್ಷನ್ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 35ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್‌ನಲ್ಲಿ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಬಸ್ ಅವಘಡದ ಸಂದರ್ಭದಲ್ಲಿ ಹಲವು ಪ್ರಯಾಣಿಕರ ಮೊಬೈಲ್ ಫೋನ್‌ಗಳು ನಾಪತ್ತೆಯಾಗಿವೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಘಟನೆಗೆ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎನ್ನಲಾಗಿದ್ದು, ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Related posts

Leave a Reply