Header Ads
Header Ads
Breaking News

ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವು

ಬಂಟ್ವಾಳ: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಇಲ್ಲಿನ ಗಿರಿಯಪ್ಪ ಎಂಬವರ ಪುತ್ರಿ ಕೀರ್ತಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಕಲ್ಲಡ್ಕದ ಖಾಸಗಿ ವಿದ್ಯಾಸಂಸ್ಥೆಯ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತಿದ್ದ ಈಕೆ ಎರಡು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಚಿಕಿತ್ಸೆ ನೀಡಿದ ಬಳಿಕವೂ ಗುಣಮುಖಳಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲೂ ಆಕೆಯ ದೇಹ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೈದ್ಯರು ನೀಡಿದ ಔಷಧಿ ವ್ಯತ್ಯಾಸದಿಂದ ಕೀರ್ತಿ ಸಾವು ಸಂಭವಿಸಿದೆ ಎಂದು ಮನೆಮಂದಿ ಆರೋಪಿಸಿದ್ದಾರೆ.

Related posts

Leave a Reply