Header Ads
Header Ads
Breaking News

ಚಿತ್ರನಟ ಅಂಬರೀಶ್ ನಿಧನಕ್ಕೆ ಗಣ್ಯರ ಸಂತಾಪ

ಮಾಜಿ ಸಚಿವ, ಚಿತ್ರನಟ ಅಂಬರೀಶ್ ನಿಧನಕ್ಕೆ ಸಚಿವರಾದ ಆರ್.ವಿ. ದೇಶಪಾಂಡೆ, ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು ಸಂತಾಪ ಸೂಚಿಸಿದರು.

ಆತ್ಮೀಯ ಸ್ನೇಹಿತನನ್ನು ನಾನು ಕಳೆದುಕೊಂಡಿದ್ದೇನೆ. ಅವರು ಕರ್ನಾಟಕ ಮಾತ್ರವಲ್ಲ, ದೇಶ-ವಿದೇಶದಲ್ಲೂ ಕೂಡಾ ಖ್ಯಾತರಾಗಿದ್ದರು. ರಾಜ್ಕುಮಾರ್ ನಂತರ ಚಲನಚಿತ್ರರಂಗಕ್ಕೆ ಅವರು ಆಧಾರ ಸ್ತಂಭವಾಗಿದ್ದರು. ಅವರ ನಿಧನ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ವಸತಿ ಸಚಿವರಾಗಿ ಅವರು ಹೆಮ್ಮೆ ಪಡುವ ಕೆಲಸ ಮಾಡಿದ್ದರು. ಬಡವರು, ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ಸ್ನೇಹಜೀವಿಯಾಗಿದ್ದ ಅವರನ್ನು ನಾಡು ಕಳೆದುಕೊಂಡಿದೆ ಎಂದು ಆರ್.ವಿ.ದೇಶಪಾಂಡೆ ತಿಳಿಸಿದರು.
ಅಂಬರೀಶ್ ಸರಕಾರ, ಕಲಾವಿದರ ಮತ್ತು ಚಿತ್ರರಂಗದ ಕೊಂಡಿಯಾಗಿದ್ದರು. ಇದೀಗ ಆ ಕೊಂಡಿ ಕಳಚಿ ಬಿದ್ದಿದೆ. ಇದರಿಂದ ಚಿತ್ರರಂಗಕ್ಕೆ, ಸರಕಾರಕ್ಕೆ ಅಪಾರ ನಷ್ಟವಾಗಿದೆ. ಅವರ ಅಗಲಿಕೆ ದು:ಖ ತಂದಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ಅಂಬರೀಶ್ ಶ್ರೇಷ್ಠ ಕಲಾವಿದರಾಗಿ, ಉತ್ತಮ ರಾಜಕಾರಣಿಯಾಗಿ ಮೆರೆದಿದ್ದರು. ಚಲನಚಿತ್ರ ರಂಗದ ಭೀಷ್ಮ ಆಗಿದ್ದ ಅವರು ಮಾತು ಚಿತ್ರರಂಗಕ್ಕೆ ಅಂತಿಮ ಆಗಿತ್ತು. ಚಿತ್ರರಂಗಕ್ಕೆ ಒಳ್ಳೆಯ ಹೆಸರು ತಂದಿದ್ದರು. ಸಚಿವರಾಗಿ ಅದ್ಭುತ ಕಾರ್ಯ ಮಾಡಿದ್ದರು. ರಾಜಕಾರಣ, ಚಿತ್ರರಂಗಕ್ಕೆ ತುಂಬಾ ನಷ್ಟವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಸಂತಾಪ ಸೂಚಿಸಿದ್ದಾರೆ.

Related posts

Leave a Reply