Header Ads
Header Ads
Breaking News

ಚೀನಾ ವಸ್ತುಗಳ ಬಳಕೆ ನಿಷೇಧಿಸುವಂತೆ ಜನಜಾಗೃತಿ ಅಭಿಯಾನ, ಆಗಸ್ಟ್ ೨೫ ರಂದು ಕಾರ್ಯಕ್ರಮ

ಪುತ್ತೂರಿನ ನರೇಂದ್ರ ಪದವಿಪೂರ್ವ ಕಾಲೇಜು ವತಿಯಿಂದ “ರಾಷ್ಟ್ರೀಯ ಸ್ವದೇಶಿ-ಸುರಕ್ಷಾ ಅಭಿಯಾನ”, ಜನಜಾಗೃತಿ ಜಾಥಾ ಮೆರವಣಿಗೆ-ಜನಸಂಪರ್ಕ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯಂದು ನಗರದಾದ್ಯಂತ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ರೂಪಲೇಖ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ೭೦ನೇ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ “ಚೀನಾ ವಸ್ತುಗಳನ್ನು ಬಹಿಷ್ಕರಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ಆ.೧೫ ರಂದು ಬೆಳಗ್ಗೆ ೧೦.೩೦ ಕ್ಕೆ ನರೇಂದ್ರ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿದಂತೆ ಸುಮಾರು ೩೦೦ ಮಂದಿ ದರ್ಬೆ ಪರಿಸರದಿಂದ ಬೊಳುವಾರು ತನಕ ಕಾಲ್ನಡಿಗೆ ಜಾಥಾದಲ್ಲಿ ಸಾಗಿ ಅಂಗಡಿಗಳು, ಸಾರ್ವಜನಿಕರು, ವರ್ತಕರನ್ನು ಸಂಪರ್ಕಿಸಿ ಕರಪತ್ರ, ಜಾಗೃತಿ ಪುಸ್ತಕಗಳನ್ನು ವಿತರಿಸುವ ಮೂಲಕ ಚೀನಾ ವಸ್ತುಗಳ ಬಳಕೆ ನಿಷೇಧಿಸುವಂತೆ ಮನವಿ ಮಾಡಲಾಗುವುದು ಎಂದರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರವಿಕುಮಾರ್ ಐ., ಪ್ರಾಂಶುಪಾಲ ಅನಿಲ್ ಕುಮಾರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ತೀರ್ಥರಾಜ್ ಕೆ., ಕಾರ್ಯದರ್ಶಿ ಸುವಿತ ರೈ, ತಾಪಂ ಸದಸ್ಯ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

Related posts

Leave a Reply