Header Ads
Header Ads
Breaking News

ಚುನಾವಣಾ ಅಧಿಕಾರಿಗಳಿಂದ ದಾಖಲೆಯಿಲ್ಲದ ನಗದು ವಶ ಸುಮಾರು 2 ಲಕ್ಷ ನಗದು ವಶಪಡಿಸಿಕೊಂಡ ಅಧಿಕಾರಿಗಳು

ಬ್ರಹ್ಮಾವರ ಬಳಿ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ್ ಗುರುವಾರ ವಾಹನಗಳ ತಪಾಸಣೆ ನಡೆಸುವ ಸಂದರ್ಭ ಬಿಜೆಪಿ ಪಕ್ಷದ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಗುರುವಾರ ಸಂದರ್ಭ ಬ್ರಹ್ಮಾವರ ಬಳಿ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ವಾಹನಗಳ ತಪಾಸಣೆ ನಡೆಸುವ ವೇಳೆ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಮಾರಾಳಿ ಪ್ರತಾಪ್ ಹೆಗ್ಡೆಯವರ ಡಸ್ಟರ್ ಕಾರಿನಲ್ಲಿ ರೂ 2 ಲಕ್ಷ ನಗದು ಹಾಗೂ ಉಡುಪಿ ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಅವರಿಗೆ ಸೇರಿದ ಚುನಾವಣಾ ಸಂಬಂಧಿ ಪ್ರಚಾರದ ಕರಪತ್ರಗಳು ಪತ್ತೆಯಾಗಿದ್ದು, ನಗದಿಗೆ ಯಾವುದೇ ದಾಖಲೆ ಇಲ್ಲದ ಕಾರಣ ನಗದು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಪಲ್ಲವಿ ಸಂತೋಷ್

Related posts

Leave a Reply