
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳಕ್ಕೆ ಆಗಮಿಸಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯ ಕೇಂದ್ರಕ್ಕೆ ಭೇಟಿ ನೀಡಿ, ಮಸ್ಟರಿಂಗ್, ಡಿ ಮಸ್ಟರಿಂಗ್ ಕೇಂದ್ರದನ್ನು ಅವಲೋಕಿಸಿದರು. ಸಹಾಯಕ ಕಮೀಷನರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ದಿವಾಕರ ಮುಗುಳಿಯ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.