Header Ads
Breaking News

ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಸರ್ವಸನ್ನದ್ಧ : ಕಮೀಷನರ್ ಸಂದೀಪ್ ಪಾಟೀಲ್ ಹೇಳಿಕೆ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯನ್ನು ಸಾಂಗವಾಗಿ ನೆರವೇರಿಸಲು ಪೊಲೀಸ್ ಇಲಾಖೆ ಸರ್ವಸನ್ನದ್ಧವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಚುನಾವಣಾ ಪೂರ್ವತಯಾರಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಪೆಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 883 ಮತಗಟ್ಟೆಗಳನ್ನು ತೆರೆಯಲಾಗಿದೆ. ಇವುಗಳಲ್ಲಿ 220 ಕ್ರಿಟಿಕಲ್ ಮತಗಟ್ಟೆಗಳಾಗಿದ್ದು, 663 ಸಾಮಾನ್ಯ ಮತಗಟ್ಟೆಗಳಾಗಿವೆ. ನಗರದ ಆಯ್ದ ಸೂಕ್ಷ್ಮ ಸ್ಥಳಗಳಲ್ಲಿ ವಿಧಾನ ಸಭಾ ಕ್ಷೇತ್ರವಾರು 3 ಸಿಎಆರ್ ತುಕಡಿಯಂತೆ ಒಟ್ಟು 12 ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಚುನಾವಣೆ ಬಂದೋಬಸ್ತ್‍ಗೆ ಇಬ್ಬರು ಡಿಸಿಪಿ, 7ಮಂದಿ ಡಿವೈಎಸ್ಪಿ, ಎಸಿಪಿ, 16 ಪಿಐ, 37 ಪಿ.ಎಸ್.ಐ ಸಹಿತ ಒಟ್ಟು 1,500 ಅಧಿಕಾರಿ ಹಾಗೂ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಹೇಳಿದರು.

Related posts

Leave a Reply

Your email address will not be published. Required fields are marked *