Header Ads
Breaking News

ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆ ಈಡೇರಿಸಿದ ತೃಪ್ತಿ ಇದೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿಕೆ

ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ನಂತರ  ನಡೆದ ಬಿಜೆಪಿ ಕಾರ್ಯಕರ್ತರಕ ಸಮಾವೇಶದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜರು, ಬೆಳ್ತಂಗಡಿ ತಾಲೂಕಿಗೆ 2 ವರ್ಷದಲ್ಲಿ ಈಗಾಗಲೇ ಸುಮಾರು 400 ಕೋಟಿಗಿಂತಲೂ ಹೆಚ್ಚಿನ ಅನುದಾನವನ್ನು ತರುವಲ್ಲಿ ಯಶಸ್ವಿಯಾಗಿದ್ದೇವೆ. ರಾಜ್ಯದಲ್ಲಿ ಅತೀ ಹೆಚ್ಚು ಅನುದಾನವನ್ನು ತಂದ ತಾಲೂಕು ಬೆಳ್ತಂಗಡಿ ಆಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತರಿಗೆ ಹಾಗೂ ಬಡ ವರ್ಗದವರಿಗೆ ವಿವಿಧ ಸವಲತ್ತುಗಳನ್ನು ಘೋಷಣೆ ಮಾಡಿದ್ದಾರೆ. ಆಯುಷ್ಮಾನ್ ಯೋಜನೆಯಿಂದ ಬಡವರಿಗೆ ಸುಮಾರು 5 ಲಕ್ಷದವರೆಗೆ ವಿಮೆ ನೀಡುವ ಮೂಲಕ ಬಡವರ ಆರೋಗ್ಯ ರಕ್ಷಣೆ ಮಾಡುವ ಕೆಲಸ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಇದೇ ರೀತಿ ಇನ್ನು ಮುಂದೆ ಕೂಡ ಬಿಜೆಪಿ ಕಾರ್ಯಕರ್ತರ ಸಹಕಾರದಿಂದ ಇನ್ನು ಹೆಚ್ಚಿನ ಅನುದಾನವನ್ನು ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು. ಪಟ್ರಮೆ ಗ್ರಾಮದ ಹಲವಾರು ಕಮ್ಯೂನಿಷ್ಟ್ ಕಾರ್ಯಕರ್ತರು ಬಿಜೆಪಿ ಸೇರಿದರು.

Related posts

Leave a Reply

Your email address will not be published. Required fields are marked *