Header Ads
Breaking News

ಚೆಕ್ ಪೋಸ್ಟ್‍ನಲ್ಲಿ ವಾಹನ ತಪಾಸಣೆಯ ವೇಳೆ ಗುಂಡಿನ ದಾಳಿ

ಕರ್ನಾಟಕ ಕೇರಳ ಗಡಿ ಭಾಗದ ಸಾಲೆತ್ತೂರು ಕೊಡಂಗೆಯ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆಯ ವೇಳೆ ವಿಟ್ಲ ಪೋಲೀಸ್ ಉಪನಿರೀಕ್ಷಕರನ್ನೊಳಗೊಂಡ ತಂಡದ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದ ಡಿ ಗ್ಯಾಂಗ್ ಮುಖ್ಯಸ್ಥ ಸೇರಿ ನಾಲ್ಕು ಮಂದಿ ಕುಖ್ಯಾತರನ್ನು ಪೆರಾಜೆ ಗ್ರಾಮದ ಬುಡೋಳಿಯಲ್ಲಿ ಬಂಧಿಸಿದ್ದಾರೆ.

ಡಿ ಗ್ಯಾಂಗ್ ಮುಖ್ಯಸ್ಥ ಎಂದು ಗುರುತಿಸಿಕೊಂಡ ಮೀಯಪದವು ಮೂಡಂಬೈಲು ನಿವಾಸಿ ಅಬ್ದುಲ್ ರಹಿಮಾನ್ ಯಾನೆ ರಹೀಂ (25), ಮಹಾರಾಷ್ಟ್ರ ಜಲಗಾವ್ ಮುಕುಂದ ನಗರ ನಿವಾಸಿ ರಾಕೇಶ್ ಕಿಶೋರ್ ಬಾವಿಸ್ಕರ್ ಯಾನೆ ರಾಕಿ ಯಾನೆ ರಾಕಿ ಬಾಯ್ (27), ಡಿ ಗ್ಯಾಂಗ್ ಸದಸ್ಯರಾದ ಕಡಂಬಾರು ಬಟ್ಯಪದವು ನಿವಾಸಿ ಮಹಮ್ಮದ್ ಫಯಾಝ್ ಯಾನೆ ಕೂವ ಫಯಾಝ್ (22), ಮಂಗಲ್ಪಾಡಿ ಸೋಂಕಾಳ್ ನಿವಾಸಿ ಹೈದರ್ ಅಲಿ ಯಾನೆ ಹೈದರ್ (20) ಬಂಧಿತ ಆರೋಪಿಗಳಾಗಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Related posts

Leave a Reply

Your email address will not be published. Required fields are marked *