Header Ads
Breaking News

ಚೆರ್ಕಳಂ ಅಬ್ದುಲ್ಲ ನಿಧನ. ಮಾಜಿ ಸಚಿವ, ಮುಸ್ಲಿಂ ಲೀಗ್‌ನ ಹಿರಿಯ ಮುಖಂಡ. ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ.

ಮಾಜಿ ಸಚಿವ, ಮುಸ್ಲಿಂ ಲೀಗ್‌ನ ಹಿರಿಯ ಮುಖಂಡ, ಮುಸ್ಲಿಂ ಲೀಗ್ ರಾಜ್ಯ ಸಮಿತಿ ಕೋಶಾಧಿಕಾರಿಯೂ ಆಗಿದ್ದ ಚೆರ್ಕಳಂ ಅಬ್ದುಲ್ಲ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಕಳೆದ ದಿನ ಮನೆಗೆ ಕರೆ ತರಲಾಗಿತ್ತು. 1947 ರಲ್ಲಿ ಬಾರಿಕ್ಕೋಡು ಮುಹಮ್ಮದ್ ಹಾಜಿ – ಆಯಿಶುಮ್ಮ ದಂಪತಿಗಳ ಪುತ್ರನಾಗಿ ಜನಿಸಿದ ಚೆರ್ಕಳಂ ಅಬ್ದುಲ್ಲ ಯೂತ್ ಲೀಗ್ ಮೂಲಕ ರಾಜಕೀಯ ಪ್ರವೇಶಿಸಿದ್ದರು. 1987 ರಲ್ಲಿ ಮೊದಲ ಭಾರಿಗೆ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆ ಯಾಗಿದ್ದರು.1991,1996,2001 ರಲ್ಲಿಯೂ ಮಂಜೇಶ್ವರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.2001 ರಲ್ಲಿ ಎ.ಕೆ. ಆಂಟನಿ ಸಚಿವ ಸಂಪುಟದಲ್ಲಿ ಸ್ಥಳೀಯಾಡಳಿತ ಖಾತೆ ಸಚಿವರಾಗಿದ್ದರು.ಕಾಸರಗೋಡು ಜಿಲ್ಲೆಯಲ್ಲಿ ಮುಸ್ಲಿಂ ಲೀಗ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಹಲವು ವರ್ಷಗಳ ಕಾಲ ಮುಸ್ಲಿಂ ಲೀಗ್ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

Related posts

Leave a Reply