Header Ads
Header Ads
Header Ads
Breaking News

ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ : ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದ ಸಮೀಪ ಘಟನೆ

ಉಡುಪಿ: ಇಂದ್ರಾಣಿ ರೈಲು ನಿಲ್ದಾಣದ ಸನಿಹದ ರೈಲು ಹಳಿಯ ಪಕ್ಕ ಚಿದ್ರಗೊಂಡ ಸ್ಥಿತಿಯಲ್ಲಿ ಸುಮಾರು ೫೫ ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವು ಪತ್ತೆಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಚಲಿಸುತ್ತೀರುವ ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಸಾವಿನ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಣಿಪಾಲ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವ ಸಾಗಿಸಲು ಇಲಾಖೆಗೆ ನೆರವಾಗಿದ್ದಾರೆ. ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರ ಅಥವಾ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

 

Related posts

Leave a Reply

Your email address will not be published. Required fields are marked *