Header Ads
Header Ads
Breaking News

ಜನವರಿ 19ರಂದು ಪುತ್ತೂರಿನಲ್ಲಿ ಕೋಟಿ-ಚೆನ್ನಯ್ಯ ಜೋಡುಕರೆ ಕಂಬಳ.

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರು ಗದ್ದೆಯಲ್ಲಿ ಉದ್ಯಮಿ ಎನ್. ಮುತ್ತಪ್ಪ ರೈ ಸಾರಥ್ಯದಲ್ಲಿ ಜ. 19ರಂದು 26ನೇ ವರ್ಷದ ಐತಿಹಾಸಿಕ ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳ ಕೂಟವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾರ್ಗದರ್ಶನದಲ್ಲಿ ಕಂಬಳ ಕೂಟವು ನಡೆಯಲಿದೆ ಎಂದರು.

26ನೇ ವರ್ಷದ ಕಂಬಳ ಕೂಟವನ್ನು ಡಿ. 19ರಂದು ಬೆಳಗ್ಗೆ 10.30ರ ಶುಭ ಘಳಿಗೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ವಹಿಸಲಿದ್ದಾರೆ. ಈ ಬಾರಿಯ ಕಂಬಳ ಕೂಟದಲ್ಲಿ ಆರು ವಿಭಾಗಳಲ್ಲಿ 150 ಜೊತೆ ಓಟದ ಕೋಣಗಳು ಪಾಲ್ಗೊಳ್ಳಲಿವೆ. ಕಳೆದ ಬಾರಿಯೂ ದಾಖಲೆ ಸಂಖ್ಯೆಯಲ್ಲಿ ಓಟದ ಕೋಣಗಳು ಪಾಲ್ಗೊಂಡಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಸಂಚಾಲಕ ಎನ್. ಸುಧಾಕರ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಕೋಶಾಧಿಕಾರಿ ಪ್ರಸನ್ನ ಶೆಟ್ಟಿ, ನಿರಂಜನ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Related posts

Leave a Reply