Header Ads
Header Ads
Header Ads
Breaking News

ಜಲೀಲ್ ಹತ್ಯೆ ಪ್ರಕರಣ:12ನೇ ಆರೋಪಿಗೆ ಜಾಮೀನು

ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿಯ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ 12ನೇ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಆರೋಪಿ ಲಕ್ಷ್ಮಣ ಮಾಂಬಾಡಿ ಎಂಬಾತನಿಗೆ ಬಂಟ್ವಾಳದ ಜೆ.ಎಮ್.ಎಫ಼್.ಸಿ ನ್ಯಾಯಾಲಯದ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್ ರವರು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಏಪ್ರಿಲ್ 20ರಂದು ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಅಬ್ದುಲ್ ಜಲೀಲ್‌ನನ್ನು ಪಂಚಾಯತ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರಂಭದಲ್ಲಿ ವಿಟ್ಲ ಪೋಲಿಸ್ ಠಾಣೆಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 12 ಆರೋಪಿಗಳನ್ನು ಬಂಧಿಸಿದ್ದರು ಮತ್ತು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
90 ದಿನಗಳಾದರೂ ಅಂತಿಮವರದಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರಲಿಲ್ಲ. ಇದರಿಂದಾಗಿ ಪ್ರಕರಣದ ಕೆಲವು ಆರೋಪಿಗಳಿಗೆ ಇತ್ತೀಚೆಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ 12ನೇ ಆರೋಪಿ ಲಕ್ಷ್ಮಣ ಅವರಿಗೆ ಶಾಸನಭದ್ದ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಯ ಪರವಾಗಿ ವಕೀಲರಾದ ಮಹೇಶ್ ಕಜೆ, ರಾಜಾರಾಮ ಬಂಟ್ವಾಳ ಮತ್ತು ಅರುಣ ಗಣಪತಿಯವರು ವಾದಿಸಿದ್ದರು.

Related posts

Leave a Reply