Header Ads
Breaking News

ಜಾನುವಾರು ಸಾಗಾಟದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವದಂತಿ : ಟ್ವೀಟ್ ಮೂಲಕ ಜಿಲ್ಲಾಡಳಿತ ಸ್ಪಷ್ಟನೆ

ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‍ರವರಿಗೆ ವಾಟ್ಸಾಪ್ ಗ್ರೂಪ್‍ವೊಂದರಲ್ಲಿ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಾಟ್ಸಾಪ್ ಗ್ರೂಪ್ ಒಂದರಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ನೇರವಾಗಿ ತುಳುವಿನಲ್ಲಿ ಜಿಲ್ಲಾಧಿಕಾರಿಯ ಹತ್ಯೆಯ ಬಗ್ಗೆ ಬೆದರಿಕೆಯೊಡ್ಡಿದ್ದಾನೆ. ಇದ್ರ ಸ್ಕ್ರೀನ್ ಶಾಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ. ಇದರ ಬೆನ್ನಲ್ಲೇ ದ.ಕ ಜಿಲ್ಲಾಡಳಿತ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಜಾನುವಾರು ಸಾಗಾಣಿಕೆಗೆ ಸಂಬಂಧಿಸಿದಂತೆ ಅನೇಕರು ಗೊಂದಲ ಉಂಟುಮಾಡ್ತಾ ಇರೋದು ಕಂಡು ಬರ್ತಾ ಇದೆ. ಯಾವುದೇ ಅಕ್ರಮ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಪೊಲೀಸರಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಕಾರಣಕ್ಕೂ ವದಂತಿಗಳಿಗೆ ಕಿವಿಕೊಡಬಾರದು ಎಂದು ಜಿಲ್ಲಾಡಳಿತ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

Related posts

Leave a Reply

Your email address will not be published. Required fields are marked *