Header Ads
Header Ads
Header Ads
Breaking News

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ

ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಮಾತನಾಡಿ, ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತ ದೊಂದಿಗೆ ಸಹಕರಿಸಬೇಕು. ವದಂತಿ ಹರಡುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಹಂತದಲ್ಲಿ ಸುವ್ಯವಸ್ಥೆ ಪರಿಶೀಲಿಸಬೇಕು. ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕ ದಲ್ಲಿರಬೇಕು ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳ, ಪ್ರಾರ್ಥನಾಲಯಗಳಲ್ಲಿ ಯಾವುದೇ ಅನಪೇಕ್ಷಿತ ಚಟುವಟಿಕೆ ಗಳಿಗೆ ಅವಕಾಶ ಇಲ್ಲದಂತೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷೀ ಪ್ರಸಾದ್, ಡಿಸಿಪಿ ಅರುಣಾಂಸು ಗಿರಿ, ಅಪರ ಜಿಲ್ಲಾಧಿಕಾರಿ ರೂಪಾ,ನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಮತ್ತಿತರರು ಇದ್ದರು.

Related posts

Leave a Reply

Your email address will not be published. Required fields are marked *