Header Ads
Header Ads
Breaking News

ಜಿಲ್ಲಾ ಮಟ್ಟದ ಬೃಹತ್ ಆರೋಗ್ಯ ಮೇಳ

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೃಹತ್ ಆರೋಗ್ಯ ಮೇಳದ ಉದ್ಘಾಟನೆ ಕಾರ್ಯಕ್ರಮ ಮೂಡುಬಿದರೆಯ ಅಳ್ವಾಸ್ ವಿದ್ಯಾಗಿರಿಯ ನುಡಿಸಿರಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರ ಬೇರೆ ಬೇರೆ ಸಂದರ್ಭಗಳಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆರೋಗ್ಯ ಯೋಜನೆಯು ಒಂದು. ಇವತ್ತು ಮನೆ ಬಾಗಿಲಿಗೆ ಆರೋಗ್ಯವನ್ನು ಕೊಂಡೊಯ್ಯಬೇಕಾದ ವ್ಯವಸ್ಥೆಗಳಾಗಬೇಕು ಆ ನಿಟ್ಟಿನಲ್ಲಿ ಸರ್ಕಾರವೇ ಆರೋಗ್ಯ ಮೇಳವನ್ನು ಮೂಡುಬಿದರೆಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಸಾರ್ವಜನಿಕರಿಗೆ ಆರೋಗ್ಯಕ್ಕೆ ಸಂಬಂದಪಟ್ಟ ಮಾಹಿತಿಯನ್ನು ನೀಡುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಮೂಲ್ಕಿ ಮೂಡುಬಿದರೆ ಶಾಸಕ ಉಮಾನಾಥ್ ಕೋಟ್ಯಾನ್, ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಅನಿತಾ ಹೇಮನಾಥ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಡಾ. ರಾಜೇಶ್ವರಿ ದೇವಿ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *