Header Ads
Header Ads
Breaking News

ಜಿಲ್ಲಾ ಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶ ಮಾ.20ರಂದು ಉಪ್ಪಿನಂಗಡಿಯಲ್ಲಿ ಆಯೋಜನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ವತಿಯಿಂದ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಪಡಿ ಮಂಗಳೂರು ಇದರ ಸಹಯೋಗದೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಇದರ ಸಹಕಾರದಲ್ಲಿ ಮಾ.20ರಂದು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ಸಮುದಾಯ ಶೈಕ್ಷಣಿಕ ಸಮಾವೇಶವು ನಡೆಯಲಿದೆ ಎಂದು ತಾಲೂಕು ಎಸ್.ಡಿ.ಎಂ.ಸಿ ಒಕ್ಕೂಟದ ಅಧ್ಯಕ್ಷ ಮೋಯಿದ್ದೀನ್ ಕುಟ್ಟಿ ತಿಳಿಸಿದ್ದಾರೆ.ಶಾಲಾಭಿವೃದ್ಧಿ ಸಮಿತಿಗಳ ಹಕ್ಕೊತ್ತಾಯ ಮಂಡಿಸುವುದು ಜೊತೆಗೆ ಸರಕಾರಿರ ಶಾಲೆಗಳ ಸಬಲೀಕರಣ, ಅಭಿವೃದ್ಧಿ, ಶಿಕ್ಷಣ ಹಕ್ಕಿನ ಸಮರ್ಪಕ ಜಾರಿಗಾಗಿ ಒತ್ತಾಯ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದಭಾಗವಹಿಸುವಿಕೆ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಬಲವರ್ಧನೆಯನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಸಮಾವೇಶವನ್ನು ಶಾಸಕಿ ಶಕುಂತಳಾ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಡಿ ಮಂಗಳೂರು ನಿರ್ದೇಶಕರಾದ ರೆನ್ನಿ ಡಿಸೋಜಾ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯಿಂದ ಸುಮಾರು 600 ರಿಂದ 700 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲೆ ಶಾಲಾಭಿವೃದ್ಧಿ ಸಮಿತಿಗಳ ಸಮನ್ವಯ ವೇದಿಕೆ ಅಧ್ಯಕ್ಷ ಎಸ್.ಎಮ್.ಇಸ್ಮಾಯಿಲ್ ನೆಲ್ಯಾಡಿ, ಜಿಲ್ಲಾ ಶಾಲಾಭಿವೃದ್ಧಿ ಸಮಿತಿಗಳ ಸಮನ್ವಯ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಮುರ, ಉಪಸ್ಥಿತರಿದ್ದರು.
ವರದಿ: ಅನೀಶ್ ಪುತ್ತೂರು

Related posts