Header Ads
Header Ads
Header Ads
Breaking News

ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರಿದೆ: ಮಂಗಳೂರಿನಲ್ಲಿ ಬಿಎಸ್‌ವೈ ಹೇಳಿಕೆ

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ. ಡ್ರಗ್ಸ್ ಹಾವಳಿ ಮಿತಿ ಮೀರಿದೆ. ಇದನ್ನು ಸರಕಾರ ತಡೆಗಟ್ಟಬೇಕಿತ್ತು. ಆದರೆ, ಡ್ರಗ್ಸ್ ಮಾಫಿಯಾ ಸರಕಾರವನ್ನೇ ನಿಯಂತ್ರಿಸುವಂತಾಗಿದೆ ಎಂದು ಯಡಿಯೂರಪ್ಪ ಹೇಳಿದರು.


ಕರಾವಳಿಯು ಸೂಕ್ಷ್ಮ ಜಿಲ್ಲೆಯಾಗಿದ್ದು, ಇಲ್ಲಿ ಕೇರಳ ಮಾದರಿಯ ಹತ್ಯೆ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇದೆ. ಅಲ್ಲದೆ ಐಸಿಸ್ ಸಂಘಟನೆಗೆ ಯುವಕರನ್ನು ಸೇರ್ಪಡೆಗೊಳಿಸುವ ಏಜೆಂಟರೂ ಇಲ್ಲಿದ್ದಾರೆ. ಹಾಗಾಗಿ ಬಿಜೆಪಿ ಅಧಿಕಾರಕ್ಕೆ ಬಂದ ಮೂರೇ ತಿಂಗಳೊಳಗೆ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳದ ಕಚೇರಿಯನ್ನು ತೆರೆಯಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಯೋಗೀಶ್ ಭಟ್, ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪಕ್ಷದ ಮುಖಂಡರಾದ ರವಿಕುಮಾರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸುಲೋಚನಾ ಭಟ್ ಉಪಸ್ಥಿತರಿದ್ದರು.
ವರದಿ: ನಾಗೇಶ್ ಕಾವೂರು

Related posts

Leave a Reply