Header Ads
Header Ads
Header Ads
Breaking News

ಜಿಲ್ಲೆಯಲ್ಲಿ 66 ಸಾವಿರ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಬೈಂದೂರು ಹೋಬಳಿ ಮಟ್ಟದ ಜನಸಂಪರ್ಕ ಸಭೆ ಉದ್ಘಾಟನೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ ಮಧ್ವರಾಜ್

 
 ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಳೀಕರಣಗೊಳಿಸಿದ್ದು, ಉಡುಪಿ ಜಿಲ್ಲೆಯಲ್ಲಿ ಸುಮಾರು 66 ಸಾವಿರ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡುವ ಕೆಲಸ ಮಾಡಿದೆ ಎಂದು ಮೀನುಗಾರಿಕಾ, ಕ್ರೀಡೆ ಯುವಜನ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.ಗುರುವಾರ ಇಲ್ಲಿನ ಜೆ.ಎನ್. ಆರ್ ಕಲಾ ಮಂದಿರದಲ್ಲಿ ನಡೆದ ಬೈಂದೂರು ಹೋಬಳಿ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಬಡವರ, ಹಿಂದುಳಿದವರ, ಅಲ್ಪಾಸಂಖ್ಯಾತರ, ದಲಿತರ ಪರ ಸರ್ಕಾರವಾಗಿದ್ದು, ಸರ್ಕಾರದ ನಾನಾ ಯೋಜನೆಗಳ ಮೂಲಕ ಸಮಾಜದಲ್ಲಿ ಧ್ವನಿ ಇಲ್ಲದವರನ್ನು, ಶಕ್ತಿ ಇಲ್ಲದವರನ್ನು ಸಮಾಜದ ಮುನ್ನೆಲೆಗೆ ತರುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಅವರ ಬಳಿಗೆ ಸರ್ಕಾರ ತೆರಳಬೇಕು ಎನ್ನುವ ನೆಲೆಯಲ್ಲಿ ಗ್ರಾಮ, ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಿ, ಜನರ ಸಮಸ್ಯೆಗಳಿಗೆ ಸ್ಪಂಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದರು.

ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಇಂದು 94ಸಿ ಯೋಜನೆಯಡಿ 512 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುತ್ತದೆ, ಸಿಆರ್‌ಜಡ್ ಸಮಸ್ಯೆಯಿಂದಾಗಿ ಕರಾವಳಿ ಭಾಗದಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಾಗಿಲ್ಲ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 2500 ಕುಟುಂಬಗಳು ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಸಿಆರ್‌ಜಡ್ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ರಾಜ್ಯ ಸರ್ಕಾರ ಅನಿಲ ಬಾಗ್ಯ ಯೋಜನೆ ಜಾರಿಗೆ ತಂದಿದ್ದು, ಅದು ಡಿಸೆಂಬರ್‌ನಿಂದ ಅನುಷ್ಠನಾಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಮನೆನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

Related posts

Leave a Reply